ಮೈಸೂರು : ಮನೆಯಲ್ಲಿ ತಡರಾತ್ರಿ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ನಡೆದಿದೆ.
ಲೋಕೇಶ್ 33 ವರ್ಷ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ವೇಳೆ ಲೋಕೇಶ್ ತಾಯಿ ಹಾಗೂ ಪತ್ನಿಗೂ ವಿದ್ಯುತ್ ಸ್ಪರ್ಶಗೊಂಡಿದೆ. ಪತ್ನಿ ತಾಯಿ ರಕ್ಷಣೆಗೆ ಲೋಕೇಶ್ ಮುಂದಾಗಿದ್ದು, ಈ ವೇಳೆ ವಿದ್ಯುತ್ ಶಾಕ್ ನಿಂದ ಲೋಕೇಶ್ ಮೃತಪಟ್ಟಿದ್ದಾರೆ.
ಲೋಕೇಶ್ ಪತ್ನಿ ಕಾವ್ಯ ಹಾಗೂ ತಾಯಿ ನಾಗಮ್ಮಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚೆಸ್ಕಾಂ ಹಾಗೂ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

