ನಂಜನಗೂಡು: ಮಂಗಳಮುಖಿಯರು ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಕೆ.ಎಸ್ ಭವ್ಯ ಶ್ರೀ ಮನವಿ ಮಾಡಿದ್ದಾರೆ.

ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾತನಾಡಿದ ಅವರು,  ನಂಜನಗೂಡು ತಾಲ್ಲೂಕಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರ ಮಂಗಳಮುಖಿಯರ ಸಮೀಕ್ಷೆಯನ್ನು ಮಾಡಲಾಗುತ್ತಿದೆ.

ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಯ ಕೊಠಡಿ ಸಂಖ್ಯೆ 50 ರಲ್ಲಿ ಸಮೀಕ್ಷೆಯನ್ನು ಮಾಡಲಾಗುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತರ ಮಾಹಿತಿಯನ್ನು ಸಂಗ್ರಹಿಸಿಕೊಂಡು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ನೀಡುವ ಉದ್ದೇಶವಾಗಿದೆ ಹಾಗಾಗಿ ಈ ಸಮೀಕ್ಷೆಯಲ್ಲಿ ತಾಲ್ಲೂಕಿನ ಮಂಗಳಮುಖಿಯರು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಮಂಗಳಮುಖಿಯರ ಸಮೀಕ್ಷಗಾತಿ ಪ್ರಮೋದಿನಿ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತ ಮಂಗಳಮುಖಿಯರ ಅಭಿವೃದ್ಧಿಗಾಗಿ ಸರ್ಕಾರ ಸಮೀಕ್ಷೆ ಮಾಡುತ್ತಿದೆ. ಸಮೀಕ್ಷೆಯನ್ನು ಮಾಡಿ ಸರ್ಕಾರಕ್ಕೆ ವರದಿ ನೀಡುತ್ತೇವೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ.

ಸಾರ್ವಜನಿಕ ಆಸ್ಪತ್ರಗೆ  ಬಂದು ಸಮೀಕ್ಷೆಯಲ್ಲಿ ಭಾಗವಹಿಸಿ ತಮ್ಮ ಸ್ಪಷ್ಟ ನಿಖರವಾದ ಮಾಹಿತಿಯನ್ನು ನೀಡಬಹುದು ಇಲ್ಲವಾದಲ್ಲಿ ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಭೇಟಿ ನೀಡಬಹುದು ಎಂದು ಮನವಿ ಮಾಡಿದ್ದಾರೆ.