ನಂಜನಗೂಡು: ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮತ್ತು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನಂಜನಗೂಡು ತಾಲ್ಲೂಕು. ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆ ಟ್ರಸ್ಟ್ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಸೇರಿದಂತೆ ವಿವಿಧ ಟ್ರಸ್ಟ್ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಂಜನಗೂಡು ನಗರದ ಜೆಎಸ್ಎಸ್ ಮಂಗಳ ಮಂಟಪದಲ್ಲಿ ಬೃಹತ್ ಮಧ್ಯವರ್ಜನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
1901ನೇ ಮದ್ಯವರ್ಜನ ಶಿಬಿರವನ್ನು ನಂಜನಗೂಡು ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂದಿನಿಂದ ಡಿ.25 ರವರೆಗೆ ನಂಜನಗೂಡಿನಲ್ಲಿ ಬೃಹತ್ ಮದ್ಯವರ್ಜನ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉತ್ತಮ ಕೆಲಸಗಳು ನಡೆಯುತ್ತಿವೆ.
ನಾಡಿನಾದ್ಯಂತ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಸಮಾಜ ಮುಖಿಯಾಗಿ ಚಿಂತಿಸಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದವರಿಗೆ ಧನ ಸಹಾಯ ನೀಡುತ್ತಿದ್ದಾರೆ. ಮದ್ಯವರ್ಜನ ಶಿಬಿರ ಏರ್ಪಡಿಸಿ, ಮದ್ಯ ವ್ಯಸನಿಗಳನ್ನು ಮುಖ್ಯವಾಹಿನಿಗೆ ತರುವುದರ ಮೂಲಕ ಅವರು ಸಮಾಜದಲ್ಲಿ ಹೆಂಡತಿ-ಮಕ್ಕಳೊಂದಿಗೆ ನೆಮ್ಮದಿಯ ಜೀವನ ಸಾಗಿಸುವಂತೆ ಮಾಡುತ್ತಿದ್ದಾರೆ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅಳಗಂಚಿ ಶಿವಯ್ಯ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಂದಕುಮಾರ್, ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನಿರ್ದೇಶಕ ವಿಜಯಕುಮಾರ್ ನಾಗನಾಳ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಿವಪ್ರಸಾದ್, ಎಎಸ್ಐ ಗೋಪಾಲಕೃಷ್ಣ, ಉದ್ಯಮಿ ಜಗದೀಶ್,
ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಕೆ.ಧರ್ಮರಾಜ್, ಮೈಸೂರು ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರಾದ ಡಿ.ಜಿ ಸೋಮಶೇಖರ್ ಮೂರ್ತಿ , ಉಪಾಧ್ಯಕ್ಷೆ ಎನ್.ಶಶಿಕಲಾ ಗಿರೀಶ್, ವಲಯ ಮೇಲ್ವಿಚಾರಕಿ ಪ್ರತಿಮಾ, ಉದ್ಯಮಿ ಕೆ.ಎಸ್ ಮಣಿಕಂಠ ಸೇರಿದಂತೆ ಹಲವರು ಭಾಗವಹಿಸಿದ್ದರು.

