ನಂಜನಗೂಡು: ಮಾ.11 ರಂದು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಬೃಹತ್ ರಾಜ್ಯ ಮಟ್ಟದ ರೈತ ಜಾಗೃತಿ ಸಭೆಯನ್ನು ಆಯೋಜನೆ ಮಾಡಲಾಗಿದೆ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್ ಹೇಳಿದರು.

ನಂಜನಗೂಡು ನಗರದಲ್ಲಿ ಮಾತನಾಡಿದ ಅವರು, ರೈತ ವಿರೋಧಿ ಕಾಯ್ದೆಗಳು ಜಾರಿಯಾಗುತ್ತಲೆ ಇವೆ. ರೈತರು ಇಂದು ಬದುಕಲು ಸಾಧ್ಯವಿಲ್ಲ. ರೈತರು ಜೀವನ ನಡೆಸಲು ಆಗುತ್ತಿಲ್ಲ. ರೈತರು ಒಗ್ಗಟ್ಟಾಗುವ ಅನಿವಾರ್ಯತೆ ಇದೆ.

ಹೋರಾಟದಿಂದಲೇ ಎಲ್ಲವನ್ನೂ ಪಡೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಹೋರಾಟದ ಶಕ್ತಿಯನ್ನು ತೋರಿಸಬೇಕು ಹಾಗಾಗಿ ಮಾರ್ಚ್ 11 ರಂದು ಮಂಗಳವಾರ ಸಾವಿರಾರು ಸಂಖ್ಯೆಯಲ್ಲಿ ರೈತರು ಸೇರುತ್ತಾರೆ.

ಆ ಭಾಗದಲ್ಲಿ ದೊಡ್ಡ ಮಟ್ಟದಲ್ಲಿ ರೈತ ಜಾಗೃತಿ ಸಭೆ ನಡೆಸಲಾಗುತ್ತದೆ. ಅಲ್ಲದೆ ರೈತ ಸಾಧಕರಿಗೆ ಪ್ರೋತ್ಸಾಹ ನೀಡಲಾಗುತ್ತದೆ. ಈ ಜಾಗೃತಿ ಸಭೆಗೆ ಮೈಸೂರು ಭಾಗದಿಂದ ರೈತರು ಭಾಗವಹಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್ ಹಾಜರಿದ್ದರು.