ಮೈಸೂರು : ತಂಬಾಕು ಮಂಡಳಿಯ ವತಿಯಿಂದ ಜನಪ್ರತಿನಿಧಿಗಳು ಮತ್ತು ತಂಬಾಕು ವರ್ತಕರೊಂದಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದಲ್ಲಿ ಸಭೆ ನಡೆಸಲಾಯಿತು.
ಸಭೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಸಚಿವ ಕೆ ವೆಂಕಟೇಶ್, ಸಂಸದ ಯದುವೀರ್, ಶಾಸಕ ಜಿಡಿ ಹರೀಶ್ ಗೌಡ, ಡಿ ರವಿಶಂಕರ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು. ತಂಬಾಕು ಹರಾಜಿಗೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಚರ್ಚೆ ಮಾಡಿದರು.

