ಮೈಸೂರು: ತಂದೆಯ ಹೆಸರು ಕೆಡಿಸಲು ಸ್ಟಿಂಗ್ ವಿಚಾರ ಮುನ್ನಲ್ಲಗೆ ತಂದಿದ್ದಾರೆ. ತಂದೆಯನ್ನ ತೇಜೋವದೆ ಮಾಡಿ ಲೆಗಸಿ ಹಾಳು ಮಾಡಿ ಬ್ಲಾಕ್ ಮೇಲ್ ಮಾಡಲು ಪ್ರಯತ್ನ ನಡೆದಿದೆ. ಸ್ಟಿಂಗ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆ. ಮೈಸೂರಿನಲ್ಲಿ ಸಚಿವ ಯತೀಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪುತ್ತೂರು ಟಿಕೆಟ್ ಗಾಗಿ ಓರ್ವ ಮಹಿಳೆ ಈ ಪ್ರಕರಣದಲ್ಲಿದ್ದಾರೆ. ಆ ಮಹಿಳೆ ನಮ್ಮ ಪಕ್ಷದವರು. ಸ್ಟಿಂಗ್ ಮಾಡಿ ಟಿಕೆಟ್ ಗೆ ಬ್ಲ್ಯಾಕ್ ಮೇಲೆ ಮಾಡಲು ಯತ್ನಿಸಿದ್ದಾರೆ. ತಂದೆ ಬೇಜಾರಿಗಿದ್ದಾರೆ. 40 ವರ್ಷದ ರಾಜಕೀಯ ಕಳಂಕ ಇಲ್ಲದೆ ರಾಜಕಾರಣ ಮಾಡಿದ್ದಾರೆ. ಸತ್ಯ ನಮ್ಮ ಕಡೆ ಇದೆ. ಸತ್ಯ ಹೊರಗೆ ಬರುತ್ತೆ ಎಂದು ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸ್ಟಿಂಗ್ ಪ್ರಕರಣ ತನಿಖೆ ವಿಚಾರವಾಗಿ ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ತಂದೆಗೆ ಮಾಹಿತಿ ಬಂದಿದೆ. ಪತ್ರಕರ್ತ ರಾಕೇಶ್ ಶೆಟ್ಟಿ ಸೇರಿ ಇಬ್ಬರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಯಾರೇ ಇದ್ರು ಅರೆಸ್ಟ್ ಮಾಡಲು ತಂದೆ ಹೇಳಿದ್ದಾರೆ. ನಮ್ಮ ಸರ್ಕಾರದ ತನಿಖೆ ಮೇಲೆ ನಂಬಿಕೆ ಇದೆ. ತನಿಖೆ ಸರಿಯಾಗಿ ನಡೆಯುತ್ತಿದೆ. ಅಕಸ್ಮಾತ್ ತನಿಖೆ ಸರಿಯಾಗಿ ನಡೆಲಿಲ್ಲ ಅಂದ್ರೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುತ್ತೇವೆ ಎಂದು ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ದಸರಾ ಸರ್ಕಾರಿ ಜಾಹಿರಾತಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಫೋಟೊ ಹಾಕದ ವಿಚಾರವಾಗಿ ಪ್ರತಿ ಭಾರಿ ಉಸ್ತುವಾರಿ ಸಚಿವರ ಫೋಟೊ ಹಾಕಲ್ಲ. ನಾನು ಇದನ್ನ ಪರಿಶೀಲನೆ ಮಾಡಿದ್ದೇನೆ. ಆದರೆ ಈ ಬಾರಿ ಮಹಾರಾಜರ ಫೋಟೊ ಹಾಕಿದ್ದಾರೆ. ಮಹಾರಾಜರು ಒಂದು ಪಕ್ಷದಲ್ಲಿದ್ದಾರೆ. ಹೀಗಾಗಿ ಕಾರ್ಯಕರ್ತರು ಉಸ್ತುವಾರಿ ಸಚಿವರ ಫೋಟೋ ಯಾಕೆ ಹಾಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸಿಎಂ ಪತ್ನಿ ಪುಷ್ಪಾರ್ಚನೆ ಮಾಡಿದ ವಿಚಾರವಾಗಿ ಶಿಷ್ಟಾಚಾರದಲ್ಲಿ ಸಿಎಂ ಪತ್ನಿ ಹಾಗೂ ಇಬ್ಬರು ಸಿಎಂಗಳು ಹೆಸರು ಇರಲಿಲ್ಲ ಎಂದರು. ಮೈಸೂರಿನಲ್ಲಿ ಸ್ಪೋಟಕ ಮಾಹಿತಿಯನ್ನು ಸಚಿವ ಯತೀಂದ್ರ ಸಿದ್ದರಾಮಯ್ಯ ಬಿಚ್ಚಿಟ್ಟರು. ಸಿಎಂ ಪತ್ನಿ ಪುಷ್ಪಾರ್ಚನೆ ಮಾಡಿರುವುದು ತಪ್ಪೇನಿಲ್ಲ. ಅವರು ದೇವಿಗೆ ಪುಷ್ಪಾರ್ಚನೆ ಮಾಡಿದ್ದಾರೆ ಅಷ್ಟೇ. ಸಿಎಂ ಪತ್ನಿ ಸರ್ಕಾರದ ಕೆಲಸವನ್ನೇನು ಮಾಡಿಲ್ವಲ್ಲ. ಹೀಗಾಗಿ ಶಿಷ್ಟಾಚಾರ ಉಲ್ಲಂಘನೆಯಾದ್ರು ತಪ್ಪೇನಿಲ್ಲ ಎಂದು ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.