ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಭೇಟಿ ವೇಳೆ ಕೆಟ್ಟು ನಿಂತಿದ್ದ ಸೇನಾ ಹೆಲಿಕಾಪ್ಟರ್ ಕೊನೆಗೂ ರಿಪೇರಿಯಾಗಿದೆ.

ನಿನ್ನೆ ಮಧ್ಯಾಹ್ನ 3.20ಕ್ಕೆ ಪ್ರಧಾನಿ ಮೋದಿ ಅವರು ಲಲಿತಮಹಲ್ ಹೆಲಿಪ್ಯಾಡ್‌ಗೆ ಆಗಮಿಸಿದ್ದರು. ಈ ವೇಳೆ ಪ್ರಧಾನಿಯವರ ಬೆಂಗಾವಲಿಗೆ ಬಂದಿದ್ದ ಎರಡು ಹೆಲಿಕಾಪ್ಟರ್‌ಗಳ ಪೈಕಿ ಒಂದು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿತ್ತು. ಹೀಗಾಗಿ ಹಾರಾಟ ನಡೆಸಲಾಗದೆ ಹೆಲಿಪ್ಯಾಡ್‌ನಲ್ಲೇ ಉಳಿದಿತ್ತು.

ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಪೈಲಟ್ ಹೆಲಿಕಾಪ್ಟರ್ ಅನ್ನು ಮೈಸೂರಿನಿಂದ ಬೆಂಗಳೂರಿಗೆ ಹಾರಿಸಿಕೊಂಡು ತೆರಳಿದ್ದಾರೆ.