ಮೈಸೂರು : ಇಸ್ರೇಲ್ -ಇರಾನ್ ನಡುವಿನ ಯುದ್ಧದಲ್ಲಿ ಕನ್ನಡಿಗರ ರಕ್ಷಣೆ ವಿಚಾರವಾಗಿ ಮೈಸೂರಿನಲ್ಲಿ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿಕೆ ನೀಡಿದರು. ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.

ಮುಖ್ಯಮಂತ್ರಿಗಳು ಈ ಬಗ್ಗೆ ಮಾತನಾಡಿ ಕ್ರಮವಹಿಸಿದ್ದಾರೆ. ಈ ಘಟನೆಯಲ್ಲಿ ಮೈಸೂರಿನವರು ಇರುವ ಮಾಹಿತಿ ಇಲ್ಲಿಯವರೆಗೂ ಸಿಕ್ಕಿಲ್ಲ. ಶಾಸಕ ತನ್ವೀರ್ ಸೇಠ್ ಹೇಳಿಕೆ ವಿಚಾರವಾಗಿ ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡಲಿದೆ. ಹೈಕಮಾಂಡ್ ಏನೂ ಹೇಳುತ್ತೋ ಅದಕ್ಕೆ ನಾವೆಲ್ಲ ಬದ್ಧ ಎಂದರು.