ನಂಜನಗೂಡು: ಡಿ.21 ರಂದು ನಡೆಯುವ ಶ್ರೀ ಭಕ್ತ ಕನಕದಾಸರ ಜಯಂತೋತ್ಸವದ ರಥಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ನಂಜನಗೂಡಿನಲ್ಲಿ ಚಾಲನೆ ನೀಡಿದರು. ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಶ್ರೀ ಭಕ್ತ ಕನಕದಾಸರ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ನಂಜನಗೂಡಿನಲ್ಲಿ ಆಚರಣೆ  ಮಾಡುವ ಹಿನ್ನೆಲೆಯಲ್ಲಿ ರಥಕ್ಕೆ ಚಾಲನೆ ನೀಡಿದ್ದೇವೆ. ಪ್ರತಿ ಹಳ್ಳಿ ಹಳ್ಳಿಗೂ ರಥವು ತೆರಳಿ ಜಾತ್ಯತೀತವಾಗಿ ಜನರನ್ನು ಆಹ್ವಾನಿಸುವ ಕೆಲಸವನ್ನು ಮಾಡುತ್ತದೆ. ತಾಲ್ಲೂಕಿನಲ್ಲಿರುವ ಎಲ್ಲ ಗ್ರಾಮಗಳ ಜನರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಒಂದುಗೂಡಿಸಿ ಭಕ್ತ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಗರ್ ಹುಕುಂ ಸಮಿತಿಯ ಸದಸ್ಯೆ ಜಯಮಾಲಾ ಬೀರೇಗೌಡ, ಕನಕ ಜಯಂತೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ಮೋಹನ್ ಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ ಬೀರೇಗೌಡರು, ಮೆರವಣಿಗೆ ಸಮಿತಿಯ ಅಧ್ಯಕ್ಷ ಸಿದ್ದರಾಜು, ಪ್ರದೀಪ್, ತಮ್ಮಯ್ಯ, ಮಹೇಶ್, ಮಹದೇವ್, ಬೀರೇಶ್, ಮಣಿ, ಅಜಯ್ ಶಿವಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.