ನಂಜನಗೂಡು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನ ಮಂತ್ರಿಗಳಾದ ಡಾ. ಬಾಬು ಜಗಜೀವನ್ ರಾಮ್ ಅವರ 118 ನೇ ಜಯಂತಿ ಕಾರ್ಯಕ್ರಮವನ್ನು ದರ್ಶನ್ ಧ್ರುವನಾರಾಯಣ್ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಡಾ. ಜಗಜೀವನ್ ರಾಮ್ ಅವರ ನಿಸ್ವಾರ್ಥ ಸೇವೆ, ಸಮಾಜದಲ್ಲಿ ಸಮಾನತೆಗಾಗಿ ನಡೆಸಿದ ಹೋರಾಟ, ಶೋಷಿತ ವರ್ಗಗಳ ನ್ಯಾಯಕ್ಕಾಗಿ ತೆಗೆದುಕೊಂಡ ಹೆಜ್ಜೆಗಳು, ಹಾಗೂ ಕೃಷಿ ಕ್ಷೇತ್ರದಲ್ಲಿ ಅವರ ಕೊಡುಗೆಗಳು ಇಡೀ ರಾಷ್ಟ್ರಕ್ಕೆ ಮಾದರಿಯಾಗಿವೇ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.