ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನೀಲ್ ಬೋಸ್ ಅವರ ಹುಟ್ಟುಹಬ್ಬವನ್ನು ನಂಜನಗೂಡಿನಲ್ಲಿ ಕಾಂಗ್ರೆಸ್ ಯುವ ಮುಖಂಡ ಗುರುಪಾದಸ್ವಾಮಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು.

ಹುಟ್ಟು ಹಬ್ಬದ ಒಂದು ದಿನ ಮುಂಚಿತವಾಗಿಯೇ ಸಂಸದ ಸುನೀಲ್ ಬೋಸ್ ಅವರು ಭಾಗವಹಿಸಿ ಕಾರ್ಯಕರ್ತರ ಶುಭಾಶಯಗಳನ್ನು ಸ್ವೀಕರಿಸಿದರು. ಈ ವೇಳೆ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಸದರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಯುವ ಮುಖಂಡ ಗುರುಪಾದಸ್ವಾಮಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಸಂಸದ ಸುನೀಲ್ ಬೋಸ್ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಜನಸೇವೆಯಲ್ಲಿ ಇನ್ನಷ್ಟು ಯಶಸ್ಸು ದೊರೆಯಲಿ ಎಂದು ಕಾರ್ಯಕರ್ತರು ಶುಭ ಹಾರೈಸಿದರು.