ಮೈಸೂರು: ಮುಡಾ 50:50 ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ಮಾಹಿತಿ ಆಧರಿಸಿ ಮತ್ತೊಂದು ದೂರು ದಾಖಲಿಸುವಂತೆ ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕಾರ ದೂರು ದಾಖಲಿಸಲು ಮನವಿ ಮಾಡಲಾಗಿದೆ. ಸಿದ್ದರಾಮಯ್ಯ ಸೇರಿದಂತೆ ಇತರ ಆರೋಪಿಗಳ ಮೇಲೆ ಮತ್ತೊಂದು ದೂರು ದಾಖಲಿಸಿ ವಿಚಾರಣೆ ನಡೆಸುವಂತೆ ಲೋಕಾಯುಕ್ತ ಎಸ್ಪಿ ಉದೇಶ್ ಗೆ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.