ಮೈಸೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಬರಹಗಾರ್ತಿ ಬಾನು ಮುಷ್ತಾಕ್ ಅವರನ್ನು ಜಿಲ್ಲಾಡಳಿತದಿಂದ ಅಧಿಕೃತವಾಗಿ ಬುಧುವಾರ ಆಮಂತ್ರಣ ನೀಡಲಾಯಿತು.

ಹಾಸನದ ಅವರ ನಿವಾಸದಲ್ಲಿ ಅಧಿಕಾರಿಗಳು ಆಹ್ವಾನ ನೀಡಿದರು. ಮೈಸೂರು ಪೇಟ ತೋಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಪಾಲ್ಗೊಂಡಿದ್ದರು.

