ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ಗೆ ಭಕ್ತರು ಕೊಡುವ ಹರಕೆ ಸೀರೆ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಹರಕೆ ಹೊತ್ತು ಭಕ್ತರು ತಾಯಿ ಚಾಮುಂಡೇಶ್ವರಿ ಲಕ್ಷಾಂತರ ರೂ. ಬೆಳೆಬಾಳುವ ಸೀರೆಗಳನ್ನು ಭಕ್ತರು ನೀಡುತ್ತಾರೆ. ಈ ಸೀರೆಯನ್ನು ಚಾಮುಂಡೇಶ್ವರಿ ಬೆಟ್ಟದ ಕಾರ್ಯದರ್ಶಿ ರೂಪ ತಮ್ಮ ಕೆಳಹಂತದ ಅಧಿಕಾರಿಗಳ ಜೊತೆ ಶಾಮೀಲಾಗಿ ಮಾರಾಟ ಮಾಡುತ್ತಿದ್ದಾರೆ.

ಈ ಕುರಿತ ವಿಡಿಯೋ ಸಾಕ್ಷಿ ಸಮೇತ ಸಾಮಾಜಿಕ ಹೋರಾಟಗಾರ ಸ್ನೇಹ ಮಹಿ ಕೃಷ್ಣ ರವರಿಂದ ಕೆ.ಆರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಟ್ಟದ ಕಾರ್ಯದರ್ಶಿ ರೂಪ ಹಾಗೂ ಇತರೆ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ನೇಹ ಮಹಿ ಕೃಷ್ಣ ದೂರಿನಲ್ಲಿ ಆಗ್ರಹಿಸಿದ್ದಾರೆ.