ಮೈಸೂರು : ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ವ್ಯಾಘ್ರನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಸೆರೆ ಹಿಡಿಡಿದ್ದಾರೆ.

ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯ ಇಲಾಖೆಯ ಅಧಿಕಾರಿ ಪ್ರಭಾಕರನ್ ರವರ ಆದೇಶದ ಮೇರೆಗೆ ಎರಡು ಸಾಕಾನೆಗಳ ಸಹಾಯದಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಹಿಡಿಯಲು ಹರ ಸಾಹಸವನ್ನೇ ಪಟ್ಟಿದ್ದಾರೆ.

ಹುಲಿಯನ್ನು ಬನ್ನೇರುಘಟ್ಟ ಅರಣ್ಯ ಇಲಾಖೆಗೆ ರವಾನಿಸಲಾಗಿದೆ. ಕಾರ್ಯಾಚರಣೆಯಲ್ಲಿ ಎಸಿಎಫ್ ಪ್ರಭಾಕರ್. ಆರ್ ಎಫ್ ಓ ಕೃಷ್ಣ ಸೇರಿದಂತೆ ಅಧಿಕಾರಿಗಳು ಇದ್ದರು.