ಮೈಸೂರು: ನಮ್ಮದು ಯಾವಾಗಲೂ ರೈತ ಪರ ನಿಲುವು, ರೈತರ ಹಿತಕ್ಕಾಗಿ ಹೋರಾಟ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಕನ್ನೇಗೌಡ ಟೈಗರ್ಸ್ ವತಿಯಿಂದ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗೆ ಮಹಾಮಂಗಳಾರತಿ ಸಲ್ಲಿಕೆ ಮಾಡಲಾಯಿತು. ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸೋತಿದೆ, ರೈತರು ಈಗ ಸಂಕಷ್ಟದಲ್ಲಿ ಇದ್ದಾರೆ. ರಾಜ್ಯ ಸರ್ಕಾರ ಕೇಂದ್ರದ ಕಡೆ ಬೊಟ್ಟು ಮಾಡುವುದು ಬಿಟ್ಟು ಸ್ವಂತ ಸಂಪನ್ಮೂಲದಿಂದ ಪರಿಹಾರ ನೀಡಲಿ ಎಂದರು.

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಸಂಪನ್ಮೂಲದಿಂದಲೇ ನೆರವು ನೀಡಿದ್ದೆ, ರಾಜ್ಯಾದ್ಯಂತ ಪಕ್ಷದ ವತಿಯಿಂದ ರೈತ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ರೈತರ ಜತೆ ನಾವಿದ್ದೇವೆ.
ನೈಸ್ ಅಕ್ರಮ, ಬಿಡದಿ ಟೌನ್ ಶಿಪ್ ವಿರುದ್ಧ ಹೋರಾಟ ಮುಂದುವರಿಯಲಿದೆ. ನಾವು ಮಾಡಿದ ಯೋಜನೆ ಎಂದು ಹೇಳಿಕೊಂಡು ಹಣ ಮಾಡಲು ಹೊರಟಿದೆ ಈಗಿನ ಸರ್ಕಾರ ಎಂದರು.

ರೈತರು ಸಂಕಷ್ಟದಲ್ಲಿ ಇರುವಾಗ ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡಲಿ. ಮುಂದಿನ ದಿನಗಳಲ್ಲಿ ಈ ಸರ್ಕಾರದ ದುರಾಡಳಿತದ ವಿರುದ್ಧ ಹೋರಾಟ ಮಾಡಲಾಗುವುದು ಎಂದರು.