ನಂಜನಗೂಡು : ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಸರ್ಕಾರವು ಗ್ಯಾಸ್ ,ಪೆಟ್ರೋಲ್, ಮತ್ತು ಡೀಸೆಲ್ ಬೆಲೆ ನಿರಂತರ ಏರಿಕೆಯನ್ನು ಖಂಡಿಸಿ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಗುಂಡ್ಲುಪೇಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹುಲ್ಲಹಳ್ಳಿ ವೃತ್ತದಲ್ಲಿ ಜಮಾಹೊಣೆಗೊಂಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಮಾನವ ಸರಪಳಿಯನ್ನು ನಿರ್ಮಿಸಿ ಅಡುಗೆ ಮಾಡುವ ಗ್ಯಾಸ್ ಸಿಲಿಂಡರ್ ಬಿತ್ತಿ ಪತ್ರವನ್ನು ಪ್ರದರ್ಶಿಸಿ ಕೇಂದ್ರ ಸರ್ಕಾರದ ಜನಪ್ರತಿನಿಧಿಗಳ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು .
ನಂತರ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ದರ್ಶನ್ ಕೇಂದ್ರ ಸರ್ಕಾರವು ಜನ ಸಾಮಾನ್ಯರು ದಿನನಿತ್ಯ ಬಳಸುವ ಅಗತ್ಯ ವಸ್ತುಗಳಾದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಇದರಿಂದಾಗಿ ದ್ವಿಚಕ್ರ ವಾಹನದವರು ಮತ್ತು ಬಾರಿ ವಾಹನ ಸವಾರರಿಗೆ/ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ವಾಹನ ಸವಾರರು ವಾಹನಗಳನ್ನು ಬಿಟ್ಟು ಸೈಕಲ್ ತುಳಿಯುವ ಸಂಧರ್ಭಕ್ಕೆ ಬರುವಂತಹ ಸನ್ನಿವೇಶಗಳು ಉಂಟಾಗುತ್ತಿದೆ.
ಅಲ್ಲದೆ ಶ್ರೀ ಸಾಮಾನ್ಯರು ಮಹಿಳೆಯರು, ಸಣ್ಣಪುಟ್ಟ ಬಡ ಕುಟುಂಬಗಳು ದಿನ ನೀತ್ಯಾ ಬಳಸುವ ಗ್ಯಾಸ್ ಬೆಲೆ ಮತ್ತು ಆಹಾರ ಧಾನ್ಯಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿರುತ್ತಾರೆ. ಬಹುಷಃ ಗ್ಯಾಸ್ ಅನ್ನು ತಿರುಚಿ ಪುನಹಃ ಸೌಧೆ ಒಲೆಗೆ ಮರಳಿ ಹೋಗುವಂತಹ ಪರಿಸ್ಥಿತಿ ಬಂದಿರುತ್ತದೆ. ಈ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಸುಗಮ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಅದ್ದರಿಂದ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್, ಆಹಾರ ಧಾನ್ಯಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಕೇಂದ್ರ ಬಿ.ಜೆ.ಪಿ. ಸರ್ಕಾರದ ವಿರುದ್ಧ ಬೀದಿಗೆ ಬಂದು ಪ್ರತಿಭಟಿಸಲು ಮುಂದಾಗಿದ್ದೇವೆ .
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ನೀಡುತ್ತಿರುವ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಮೇಲೆ ಅಪವಾದ ಹೇಳಲಾಗುತ್ತಿದೆ ನಂಜನಗೂಡಿನ ಜನತೆ ಅರ್ಥಮಾಡಿಕೊಳ್ಳಬೇಕು ಕೇಂದ್ರ ಸರ್ಕಾರದ ದುರಾಡಳಿತದ ವಿರುದ್ಧ ನಿರಂತರ ಪ್ರತಿಭಟನೆಗೆ ಮುಂದಾಗ ಬೇಕಾಗುತ್ತದೆ ಎಂದು ಸಂದರ್ಭದಲ್ಲಿ ಮಾತನಾಡಿದರು. ನಂತರ ರಾಜ್ಯಪಾಲರಿಗೆ ತಹಸೀಲ್ದಾರ್ ಮೂಲಕ ಮನವಿ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ರವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್ ರವರು, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ. ಎಂ ಶಂಕರ್ ರವರು, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಕಂಠ ನಾಯಕ ರವರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ. ಮಾರುತಿ ರವರು, ಹಿರೇಹಳ್ಳಿ ಸೋಮೇಶ್ ರವರು, ನಾಗೇಶ್ ರಾಜ್ ರವರು, ಇಂದನ್ ಬಾಬು ರವರು, ಚಂದನ್ ಗೌಡ ರವರು, ವಿಜಯ್ ಕುಮಾರ್ ರವರು, ಆದರ್ಶ್ ರವರು, ಮಹೇಶ್ ರವರು ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

