ನಂಜನಗೂಡು: ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗಾರಿಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನಿರ್ಮಾಣವಾದ ಓವರ್ ಹೆಡ್ ಟ್ಯಾಂಕ್ ಗೆ ಕಳೆದ ಮೂರು ವರ್ಷಗಳಿಂದ ನೀರಿನ ಭಾಗ್ಯವೇ ಬಂದಿಲ್ಲ.
2021-22 ನೇ ಸಾಲಿನಲ್ಲಿ ನಿರ್ಮಾಣವಾದ ಓವರ್ ಹೆಡ್ ಟ್ಯಾಂಕ್ ನಿರುಪಯುಕ್ತವಾಗಿದೆ. ಲಕ್ಷಾಂತರ ರೂ.ವೆಚ್ಚ ಮಾಡಿ ನಿರ್ಮಾಣವಾದ ಟ್ಯಾಂಕ್ ಗ್ರಾಮಸ್ಥರ ನೆರವಿಗೆ ಬಂದಿಲ್ಲ. ಶೀಘ್ರದಲ್ಲೇ ನೀರು ತುಂಬಿಸಿ ಮನೆ ಮನೆಗೆ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿದ್ದಾರೆ.

ಬೇಸಿಗೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಈಗಾಗಲೇ ನೀರಿಗೆ ಹಾಹಾಕಾರವಾಗಿದೆ. ನೀರು ತುಂಬಿಸಿ ಮನೆ ಮನೆಗೆ ಸರಬರಾಜು ಮಾಡುವಂತೆ ಗ್ರಾಮಸ್ಥರು ಮೂರು ವರ್ಷಗಳಿಂದ ನಿರಂತರವಾಗಿ ಮನವಿ ಮಾಡುತ್ತಲೇ ಬಂದಿದ್ದಾರೆ. ಆದ್ರೆ ಅಧಿಕಾರಿಗಳು ಗ್ರಾಮದ ಜನತೆಯ ಮನವಿಗೆ ಸ್ಪಂದಿಸುತ್ತಿಲ್ಲ.
ಕೊಳವೆ ಬಾವಿ ಕೊರೆಸಿ ನೀರನ್ನು ತುಂಬಿಸಬೇಕು. ಜಲಜೀವನ್ ಮಿಷನ್ ಯೋಜನೆಯ ಲಕ್ಷಾಂತರ ಹಣವನ್ನು ಲಪಟಾಯಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಓವರ್ ಹೆಡ್ ಟ್ಯಾಂಕ್ ಬಳಕೆಗೆ ವ್ಯವಸ್ಥೆ ಮಾಡದಿದ್ದಲ್ಲಿ ಗ್ರಾಮೀಣ ಕುಡಿಯುವ ನೀರು ಇಲಾಖೆ ಕಛೇರಿ ಮುಂದೆ ಉಗ್ರ ಹೋರಾಟದ ಮಾಡಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

