ಮೈಸೂರು: ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ನಿಲುಗಡೆ ವಿಚಾರದಲ್ಲಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ಕಿರಿಕ್ ಆಗಿ ಪರಸ್ಪರ ಕೈ ಕೈ ಮಿಲಾಯಿಸಿಕೊಂಡ ಘಟನೆ ಹುಣಸೂರು ಬಸ್ ನಿಲ್ದಾಣದಲ್ಲಿ ನಡೆದಿದೆ.
ಪರಸ್ಪರ ಹೊಡೆದಾಟದಲ್ಲಿ ಇಬ್ಬರೂ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹುಣಸೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಕರು ರಾಜಾರೋಷವಾಗಿ ವಾಹನಗಳನ್ನ ನಿಲ್ಲಿಸಿ ಬಸ್ ಗಳ ಓಡಾಟಕ್ಕೆ ತೊಂದರೆ ಮಾಡುತ್ತಿದ್ದಾರೆ.
ಈ ಹಿನ್ನಲೆ ಸಿಬ್ಬಂದಿಯೊಬ್ಬರು ವಾಹನ ನಿಲ್ಲಿಸದಂತೆ ಸಾರ್ವಜನಿಕರೊಬ್ಬರಿಗೆ ಮನವಿ ಮಾಡಿದ್ದಾರೆ.ಈ ವೇಳೆ ಮಾತಿನ ಚಕಮಕಿ ನಡೆದು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಗಲಾಟೆಯಲ್ಲಿ ಇಬ್ಬರಿಗೂ ಗಾಯವಾಗಿ ಪೊಲೀಸ್ ಠಾಣೆ ಮೆಟ್ಟಲೇರಿದ್ದಾರೆ.ಗ್ರಾಮಾಂತರ ಠಾಣೆ ಪೊಲೀಸರು ಚಿಕಿತ್ಸೆ ಪಡೆಯುವಂತೆ ಇಬ್ಬರನ್ನೂ ಆಸ್ಪತ್ರೆಗೆ ಕಳಿಸಿದ್ದಾರೆ.

