ಬೆಂಗಳೂರು: ಸಿಎಂ ಸಿದ್ದರಾಮ್ಯಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮೊದಲು ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಮ್ಮನ ದರ್ಶನ್ ಪಡೆದುಕೊಂಡರು.
ಬಳಿಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದರು. ಈ ಸಭೆಯಲ್ಲಿ ಬೆಟ್ಟದ ಅಭಿವೃದ್ಧಿಯ ಬಗ್ಗೆ ಮಹತ್ವದ ಚರ್ಚೆಗಳು ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಘೋಷಿಸಿದರು.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಚಾಮುಂಡಿಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ . ಚಾಮುಂಡಿಬೆಟ್ಟವಷ್ಟೇ ಅಲ್ಲ ಎಲ್ಲಾ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಚಾಮುಂಡಿಬೆಟ್ಟದಲ್ಲಿ ಸುರಕ್ಷತೆ ಇರಬೇಕೆಂದು ಸಿಸಿಟಿವಿ ಅಳವಡಿಕೆ ಮಾಡಲಾಗುವುದು. ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

