ಮೈಸೂರು: ವಿರೋಧ ಪಕ್ಷದವರ ಒತ್ತಡದಿಂದ ಪ್ರಧಾನಿಗಳು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಮೂರು ವರ್ಷಗಳ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಗಲಾಟೆ ಆಗುವಾಗ ಭೇಟಿ ನೀಡದೇ, ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಷ್ಟು ವರ್ಷ ಯಾಕೆ ಹೋಗಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ವಿರೋಧಪಕ್ಷದವರ ಒತ್ತಡದಿಂದ ಈಗ ಭೇಟಿ ನೀಡುತ್ತಿದ್ದಾರೆ ಎಂದರು.

