ಮೈಸೂರು : ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರು ಕದ್ದಿದ್ದ ಕಳ್ಳನನ್ನು ಬಂಧಿಸಲಾಗಿದೆ. ಬಂಧಿತನಿಂದ 14 ಲಕ್ಷ ಮೌಲ್ಯದ ಥಾರ್ ವಾಹನ ವಶಕ್ಕೆ ಪಡೆಯಲಾಗಿದೆ.
ಕೋಲಾರ ಜಿಲ್ಲೆ ಮುಳುಬಾಗಿಲು ತಾಲೂಕಿನ ಅರುಣ್ ಕುಮಾರ್ ಬಂಧಿತ ಆರೋಪಿ. ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಥಾರ್ ಕಾರ್ ಕಳುವು ಮಾಡಿದ್ದ ಆರೋಪಿಯು
ಅದೇ ವಾಹನದಲ್ಲಿ ಬಂದು ಮೈಸೂರಿನಲ್ಲೂ ಕಳ್ಳತನ ಮಾಡಿದ್ದಾನೆ.
ಮೈಸೂರಿನ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡ್ರು ಪೆಟ್ ಮೆಡಿಕಲ್ ಸ್ಟೋರ್ಸ್ ನಲ್ಲಿ 1,80,000 ನಗದು, 60 ಗ್ರಾಂ ಚಿನ್ನ ಹಾಗೂ 36 ಗ್ರಾಂ ಬೆಳ್ಳಿ ನಾಣ್ಯಗಳನ್ನ ಅರೋಪಿ ಅರುಣ್ ಕುಮಾರ್ ಕಳವು ಮಾಡಿದ್ದಾನೆ. ಸದ್ಯ ಆರೋಪಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.

