ಮೈಸೂರು : ಪ್ರಿಯಾಂಕ ಖರ್ಗೆಗೆ ಬೆದರಿಕೆ ಕರೆಗಳ ವಿಚಾರವಾಗಿ ಮೈಸೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿಕೆ ನೀಡಿದ್ದಾರೆ.

ಈ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವ ಯಾವ ನಂಬರ್ ಗಳಿಂದ ಬೆದರಿಕೆ ಬಂದಿದೆ ಎಂಬುದನ್ನ ಪತ್ತೆ ಹಚ್ಚುತ್ತಿದ್ದೇವೆ. ಬೆದರಿಕೆ ಹಾಕಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ‌. ಬೆದರಿಕೆ ಹಾಕುವವರ ಮೇಲೆ ಕ್ರಮ ಕೈಗೊಳ್ಳದ ಹೊರತು ಇಂತಹ ಪ್ರಕರಣಗಳು ನಿಲ್ಲುವುದಿಲ್ಲ.

ಆರ್ ಎಸ್ ಎಸ್ ಶಾಖೆಗಳ ಬ್ಯಾನ್ ವಿಚಾರ ಪ್ರಿಯಾಂಕಾ ಖರ್ಗೆ ತಮ್ಮ ಅಭಿಪ್ರಾಯವನ್ನ ಪತ್ರದ ಮೂಲಕ ಹೇಳಿದ್ದಾರೆ. ಸಿಎಂ ಚರ್ಚಿಸಿ ಕ್ರಮ ಕೈಗೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಪತ್ರವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಾನು ಆ ಬಗ್ಗೆ ನಿರ್ಧಾರಗಳನ್ನ ಹೇಳಲು ಸಾಧ್ಯವಿಲ್ಲ. ಸಿಎಂ ಆ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿಕೆ ನೀಡಿದ್ದಾರೆ.