ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ವಿರುದ್ಧ ಮೈಸೂರು ತಾಲೂಕು, ಜಯಪುರ ಹೋಬಳಿ ಸಿಂಧುವಳ್ಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಜಿ.ಟಿ ದೇವೇಗೌಡ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಜಿ.ಟಿ ದೇವೇಗೌಡ ದಲಿತ ವಿರೋಧಿ ಎಂದು ಘೋಷಣೆ ಕೂಗಲಾಯಿತು.
ವಿಧಾನಸೌಧದ ಕಲಾಪದಲ್ಲಿ ದಲಿತ ವಿರೋಧಿ ಹಾಗೂ ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆಂದು ಜಿ ಟಿ ದೇವೇಗೌಡರ ವಿರುದ್ಧ ಪ್ರತಿಭಟನೆ ನಡೆಸಿದರು.

