ತಿ. ನರಸೀಪುರ: ದಲಿತ ಸಂಘರ್ಷ ಸಮಿತಿ ವತಿಯಿಂದ ಇನ್ಸ್ಪೆಕ್ಟರ್ ಧನಂಜಯ್ ಮತ್ತು ಸಬ್ ಇನ್ಸ್ಪೆಕ್ಟರ್ ಜಗದೀಶ್ ಧೂಳ್ ಶೆಟ್ಟಿ ವಿರುದ್ಧ ಪಟ್ಟಣದ ತಾಲೂಕು ಆಡಳಿತ ಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ತುಂಬಲ ಮತ್ತು ಕಲ್ಕುಣಿ ಗ್ರಾಮದ ಹತ್ತು ಯುವಕರ ಮೇಲಿನ ಹಲ್ಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ದಶಂಸ ಮುಖಂಡರಾದ ಬೆಟ್ಟಯ್ಯ ಕೋಟೆ, ಆಲಗೂಡು ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ವಿವಿಧ ಜಿಲ್ಲೆ ಮತ್ತು ತಾಲೂಕುಗಳ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಭಾಗಿಯಾದರು. ಪೋಲಿಸ್ ಇಲಾಖೆ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.
ಅಮಾಯಕ 10 ಯುವಕರ ಮೇಲೆ ಮಾರಣಂತಿಕ ಹಲ್ಲೆ ನಡೆಸಿರುವ ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ಮತ್ತು ಸಬ್ ಇನ್ಸ್ಪೆಕ್ಟರ್ ಜಗದೀಶ್ ದೂಳ್ ಶೆಟ್ಟಿ ರವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು, ನೊಂದ ಯುವಕರ ಕೇಸ್ ವಾಪಸ್ ಪಡೆಯಬೇಕು ಮತ್ತು ಸರ್ಕಾರ ಅವರ ಕುಟುಂಬಕ್ಕೆ ಪರಿಹಾರ ನೀಡಿ ರಕ್ಷಣೆ ನೀಡಬೇಕು ಎಂದು ಆಲಗೂಡು ಶಿವಕುಮಾರ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿವಿಧ ಜಿಲ್ಲೆ ಮತ್ತು ತಾಲೂಕುಗಳ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಭಾಗಿಯಾದರು. ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದೇವೆ ಶೀಘ್ರವಾಗಿ ಇನ್ಸ್ಪೆಕ್ಟರ್ ಧನಂಜಯ್ ಮತ್ತು ಸಬ್ ಇನ್ಸ್ಪೆಕ್ಟರ್ ಜಗದೀಶ್ ದೂಳ ಶೆಟ್ಟಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಪ್ರತಿಭಟನೆಯನ್ನು ಜಿಲ್ಲಾಧ್ಯಂತ ಚಳುವಳಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

