ತಿ. ನರಸೀಪುರ: ಒಳ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಬಲಗೈ ಸಂಬಂಧಿತ ಜಾತಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಬಲಗೈ ಜಾತಿ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಶ್ರೀ ಗುಂಜ ನರಸಿಂಹ ಸ್ವಾಮಿ ದೇವಾಲಯದ ಆವರಣದಿಂದ ತಾಲೂಕು ಆಡಳಿತ ಸೌದದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪರಿಶಿಷ್ಟ ಜಾತಿ ಬಲಗ ಸಂಬಂಧಿತ ಜಾತಿಗಳಿಗೆ ಅನ್ಯಾಯವನ್ನು ಸರಿಪಡಿಸುವ ತನಕ ಈ ಹಿಂದಿನ ಹಳೆ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸಬೇಕು ಹಾಗೂ ಪ್ರವರ್ಗ -ಎ,ಬಿ,ಸಿ ಜಾತಿ ಪ್ರಮಾಣ ಪತ್ರಗಳನ್ನು ನೀಡಿ ಅದನ್ನೇ ಪುರಸ್ಕರಿಸಬೇಕೆಂದು ಪ್ರತಿಭಟನೆ ಮಾಡಿದರು. ನಮ್ಮ ಮನವಿಗೆ ಸರ್ಕಾರ ಸ್ಪಂದಿಸದೆ ಹೋದರೆ ಪ್ರತಿಭಟನೆ ತೀವ್ರಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.

