ಮೈಸೂರು : ಹಾಲಿನ ದರ ಏರಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳಿಂದ ಮೈಸೂರಿನಲ್ಲಿ ಮಹಾರಾಜ ಕಾಲೇಜು ಮೈದಾನದ ಮುಂಭಾಗದ ಹಾಲಿನ ಬೂತ್ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಾಲಿನ ದರ ಇಳಿಕೆ ಮಾಡುವಂತೆ ಪ್ರತಿಭಟನಕಾರರು ಒತ್ತಾಯಿಸಿದರು.

