ಮೈಸೂರು: ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ಕರೆ ನೀಡಿದ ಹಿನ್ನಲೆ ಮೈಸೂರಿನಲ್ಲಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.
ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸೇರಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದರು. ಇದೇ ವೇಳೆ ನಿಲ್ದಾಣದ ಆವರಣದಲ್ಲಿ ಕುಳಿತು ಬಸ್ ತಡೆಯಲು ಮುಂದಾದಾಗ ಪೊಲೀಸರು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದರು.20 ಕ್ಕೂ ಹೆಚ್ಚು ಮಂದಿಯನ್ನ ಪೊಲೀಸರು ಬಂಧಿಸಿದರು.

