ಮೈಸೂರು: ಶಾಲೆಗಳಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ. ಕೇಸರಿ ಪೇಟಕ್ಕೂ ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಮೊದಲಿನಿಂದ ಯಾವ ಪೇಟಗಳಿವೆ ಆ ಪೇಟಗಳಿಗಷ್ಟೇ ಅವಕಾಶ ನೀಡಲಾಗಿದೆ. ಈಗ ಪೇಟದ ಬಣ್ಣ ಬದಲಾಯಿಸಿಕೊಂಡು ಬಂದರೆ ಅವಕಾಶ ಮಾಡಿಕೊಡುವುದಿಲ್ಲ.

ಹಿಜಬ್‌ಗೆ ಮಾತ್ರ ಅವಕಾಶ ಕೊಟ್ಟಿಲ್ಲ. ಜನಿವಾರ, ಶಿವಧಾರ, ಪೇಟಕ್ಕೂ ಅವಕಾಶ ಕೊಟ್ಟಿದ್ದೇವೆ. ಆದರೆ ಹೊಸ ರೂಪದ ಪೇಟಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.