ಮೈಸೂರು : ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆ ಶ್ರೀ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿ ಸಂಕ್ರಾಂತಿ ಆಚರಿಸಲಾಯಿತು.

ಗೋವಿಗೆ ಕಬ್ಬು, ಬೆಲ್ಲ ತಿನ್ನಿಸಿ ಪೂಜೆ ಮಾಡಲಾಯಿತು. ಯೋಗನರಸಿಂಹ ದೇವಾಲಯದಲ್ಲಿ ಬೆಳಗಿನಿಂದಲೇ ವಿಶೇಷ ಪೂಜೆ ಪುನಸ್ಕಾರ ನಡೆಯಿತು. ಮೈಸೂರಿನ ವಿಜಯನಗರದಲ್ಲಿರುವ ಯೋಗನರಸಿಂಹ ದೇವಸ್ಥಾನದಲ್ಲಿ ಸಂಕ್ರಾಂತಿ ಗೋಪೂಜೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾದರು.

ಗೋ ಮಾತೆಗೆ ಪೂಜೆ ಸಲ್ಲಿಸಿ ಎಳ್ಳು ಬೆಲ್ಲ ಬಾಳೆಹಣ್ಣು ಪ್ರತಾಪ್ ಸಿಂಹ ತಿನ್ನಿಸಿದರು. ಗೋ ಮಾತೆಗೆ ಪೂಜೆ ಸಲ್ಲಿಸಿ ಯೋಗನರಸಿಂಹ ಸ್ವಾಮಿಯ ದರ್ಶನವನ್ನು ಭಕ್ತರು ಪಡೆದರು.