ಮೈಸೂರು: ಸ್ವಾಮಿ ವಿವೇಕನಂದ ಯೂತ್ ಮೂಮ್ ಮೆಂಟ್ ನ ಸಹಯೋಗದೊಂದಿಗೆ ಸರಗೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯ ಕೇಂದ್ರ ವತಿಯಿಂದ ಹಾಡಿ ಜನರಿಗೆ ವಿಶೇಷ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಶಿಬಿರವನ್ನು ನಡೆಸುವ ಮೂಲಕ ಹಾಡಿ ನಿವಾಸಿಗಳಲ್ಲಿ ಜನನ ನಿಯಂತ್ರಣದ ಕುರಿತಂತೆ ಮಾಹಿತಿ ನೀಡಲಾಯಿತು.

ಶಿಬಿರಕ್ಕೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ” ಗೋಪಿನಾಥ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಟಿ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ನಮ್ಮ ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ವಿಶೇಷವಾಗಿ ಹಾಡಿ ಜನರಿಗೆ ಈ ರೀತಿ ವಿಶೇಷ ಸಂತಾನಹರಣ ಶಸ್ತ್ರ ಚಿಕಿತ್ಸೆ ಶಿಬಿರ ನಡೆಸುತ್ತಿರುವುದು ತುಂಬಾ ಹೆಮ್ಮೆಯಾದ ವಿಷಯ, ಹಾಡಿ ಜನರನ್ನು ಮನವೊಲಿಸಿ ಕರೆತಂದಿರುವ ನಮ್ಮ ತಾಲ್ಲೂಕಿನ ಆರೋಗ್ಯಾಧಿಕಾರಿಗಳಾದ ಡಾ.ರವಿಕುಮಾರ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ನ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳನ್ನು ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರವಿಕುಮಾರ್ ಮಾತನಾಡಿ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ರವರ ಸಹಾಯದಿಂದ ಹಾಡಿ ಜನರಿಗೆ ಮನವಲಿಸಿ 19 ಫಲಾನುಭವಿಗಳನ್ನು ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಇದರಲ್ಲಿ 18 ಜನರಿಗೆ ಈ ಶಿಬಿರದಲ್ಲಿ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಯಿತು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಹಾಡಿ ಜನರು ಬಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಿ ಎಂದು ತಿಳಿಸಿದರು.

ಈ ಶಿಬಿರದಲ್ಲಿ ಶಸ್ತ್ರ ಚಿಕಿತ್ಸೆ ತಜ್ಞರಾದ ಡಾ.ನವೀನ್, ಅರವಳಿಕೆ ತಜ್ಞರಾದ ಡಾ.ಕಿರಣ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಭಾಗ್ಯಲಕ್ಷ್ಮಿ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಪಾರ್ಥ ಸಾರಥಿ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಆಡಳಿತ ವೈದ್ಯಾಧಿಕಾರಿಗಳಾದ ಡಾ” ಅಭಿಲಾಶ್, ಮೇಲ್ವಿಚಾರಕರಾದ ವೆಂಕಟಸ್ವಾಮಿ, ಮತ್ತು ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತರು ಸಮುದಾಯ ಆರೋಗ್ಯ ಅಧಿಕಾರಿಗಳು, ಇನ್ನಿತರರು ಇದ್ದರು.