ನಂಜನಗೂಡು: ತಾಲ್ಲೂಕಿನ ದೇವಿರಮ್ಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಮಹಿಳಾ ಗ್ರಾಮ ಸಭೆಯನ್ನು ನಡೆಸಲಾಯಿತು. ದೇವಿರಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿಯಾದ ಲೋಕೋಪಯೋಗಿ ಇಲಾಖೆಯ ಎಇಇ ಬಸವರಾಜು ರವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರು ಇಡೀ ಕುಟುಂಬದ ಶಕ್ತಿಯಾಗಿರುತ್ತಾರೆ.

ಮಹಿಳೆಯರು ಮೌಡ್ಯತೆಗಳಿಂದ ಹೊರಬಂದು ಸಾಮಾಜದ ಮುಖ್ಯವಾಹಿನಿಗೆ ತೆರೆದುಕೊಳ್ಳಬೇಕು. ಗ್ರಾಮೀಣ ಭಾಗದ ಮಹಿಳೆಯರು ಸ್ವಾಬವಲಂಬಿ ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅತ್ಯಗತ್ಯವಾಗಿದೆ. ಹಾಗಾಗಿ ಹೆಣ್ಣುಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಗಳನ್ನು ಪಡೆಯುವಂತೆ ತಿಳಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವಸ್ವಾಮಿ ರವರು ಮಾತನಾಡಿ, ಸರ್ಕಾರವು ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಕಾಲ ಕಾಲಕ್ಕೆ ನೀಡುತ್ತಿದೆ. ಅದರ ಅರಿವನ್ನು ಪಡೆದು ಸದ್ಬಳಕೆ ಮಾಡಿಕೊಳ್ಳಬೇಕು. ಅದಕ್ಕಾಗಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ, ಮಹಿಳಾ ಸಭೆ, ವಾರ್ಡ್ ಸಭೆ, ಮಕ್ಕಳ ಸಭೆಯಲ್ಲಿ ಪಾಲ್ಗೊಂಡು ಹಲವು ಯೋಜನೆಗಳ ಜ್ಞಾನ ವೃದ್ಧಿಸಿಕೊಳ್ಳುವಂತೆ ಸಲಹೆ ನೀಡಿದರು.

ತಾಲ್ಲೂಕು ನರೇಗಾ ಐಇಸಿ ಸಂಯೋಜಕಿ ಕಾವ್ಯ ರವರು ಮಾತನಾಡಿ, ನರೇಗಾದಲ್ಲಿ ಮಹಿಳೆಯರ ಭಾಗವಹಿಸುವಿಕೆಗಾಗಿ ತಾಲ್ಲೂಕಿನಲ್ಲಿ ಸ್ತ್ರೀ ಚೇತನ ಅಭಿಯಾನ ನಡೆಯುತ್ತಿದ್ದು, ಮಹಿಳಾ ಅಕುಶಲ ಕೂಲಿಕಾರ್ಮಿಕರು ಶೇ. 55 ಕ್ಕಿಂತ ಹೆಚ್ಚು ಕೆಲಸ ಮಾಡುವ ಉದ್ದೇಶವಾಗಿದ್ದು, ನರೇಗಾದಲ್ಲಿ ಗಂಡು-ಹೆಣ್ಣಿಗೆ ಸಮಾನ ಕೂಲಿಯಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಮ್ಯೂಸಿಕಲ್ ಚೇರ್, ನರೇಗಾ ಕರಪತ್ರ ಹಿಡಿದು, ಲೆಮನ್ ಅಂಡ್ ಸ್ಪೂನ್ ಸ್ಪರ್ಧೇ ಏರ್ಪಡಿಸಿದ್ದು, ವಿಜೇತರಿಗೆ ಬಹುಮಾತನ ವಿತರಿಸಲಾಗಿದೆ. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹರಿಣಿ, ಎಸ್.ಡಿ.ಎ, ಎಸ್.ಬಿ.ಎಂ. ಬ್ಯಾಂಕ್ ಸಿಬ್ಬಂದಿ ದೊರೆಸ್ವಾಮಿ, ,ಎನ್.ಆರ್.ಎಲ್.ಎಂ. ಎಂ.ಬಿ.ಕೆ, ಶಶಿಕಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.