ಮೈಸೂರು: ಡಿಕೆ ಶಿವಕುಮಾರ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲೆಂಂದು ಮೈಸೂರಿನಲ್ಲಿ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಮೈಸೂರು ಜಿಲ್ಲಾ ಘಟಕದ ವತಿಯಿಂದ ವಿಶೇಷ ಪೂಜೆ ಸಲ್ಲಿಸಿದ್ದಾರೆ.

101 ತೆಂಗಿನ ಕಾಯಿ ಇಡುಗಾಯಿ ಒಡೆದು ನೆಚ್ಚಿನ ನಾಯಕನ ಬಗ್ಗೆ ಪ್ರಾರ್ಥನೆ ಮಾಡಿದ್ದಾರೆ. ಡಿಕೆ.ಶಿವಕುಮಾರ್ ಭಾವಚಿತ್ರ ಹಿಡಿದು ಘೋಷಣೆ ಕೂಗಿ ಡಿಕೆ.ಶಿವಕುಮಾರ್ ಗೆ ಜಯವಾಗಲೆಂದು ಘೋಷಣೆ ಕೂಗಿದರು. ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.