ನಂಜನಗೂಡು: ತಾಲ್ಲೂಕಿನ ನೇರಳೆ ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ. ಬೆಳಿಗ್ಗೆ ಬಂದು ಕಛೇರಿ ತೆರೆದು ಪರಾರಿಯಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಬಿಲ್ ಕಲೆಕ್ಟರ್, ಕಾರ್ಯದರ್ಶಿ, ಕಂಪ್ಯೂಟರ್ ಆಪರೇಟರ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳ ಕುರ್ಚಿಗಳು ಖಾಲಿಯಾಗಿವೆ. ದಿನನಿತ್ಯ ಕೆಲಸ ಕಾರ್ಯಗಳಿಗೆ ಗ್ರಾಮ ಪಂಚಾಯಿತಿ ಕಛೇರಿಗೆ ಬರುವ ಸಾರ್ವಜನಿಕರು ಪರದಾಡಿದ್ದಾರೆ. ಎನ್ ಆರ್ ಜಿ ಬಗ್ಗೆ ಕೇಳಿದರೆ ಹಣ ಕೇಳುತ್ತಿದ್ದಾರೆ.
ಕಳೆದ ನಾಲ್ಕು ತಿಂಗಳಿಂದ ಅಲೆದಾಡಿಸುತ್ತಿದ್ದಾರೆ. ಇಂದು ಬೆಳಿಗ್ಗೆ ಗ್ರಾ.ಪಂ ಕಛೇರಿಗೆ ಹೋಗಿ ನೋಡಿದರೆ ಸಿಬ್ಬಂದಿಗಳು ಯಾರು ಇರಲಿಲ್ಲ. ಕೂಡಲೇ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಗ್ರಾಪಂ ಸದಸ್ಯ ನಂಜಯ್ಯ ಆಗ್ರಹಿಸಿದ್ದಾರೆ.

