ನಂಜನಗೂಡು: ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಧೀಂದ್ರ ಸೋಮವಾರ ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿ, ಚಾಮರಾಜನಗರ ಜಿಲ್ಲೆಗೆ ಕಾರ್ಯನಿಮಿತ್ತ ತೆರಳುತ್ತಿದ್ದ ಹಿನ್ನೆಲೆ, ಪ್ರಸಿದ್ಧ ಧಾರ್ಮಿಕ ಕ್ಷೇತ್ರ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿಯ ದರ್ಶನ ಪಡೆಯಲು ಆಗಮಿಸಿದ್ದೇನೆ. ಇಲ್ಲಿಗೆ ಬಂದಿರುವುದು ಬಹಳ ಖುಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೈವಿಕ ಇಂಧನದ ಬಗ್ಗೆ ಸಾಕಷ್ಟು ಅಭಿವೃದ್ಧಿಗೆ ಮುಂದಾಗಿದ್ದಾರೆ.

ರಾಜ್ಯದಲ್ಲಿ ಬಯೋ ಡೀಸೆಲ್ ಹೆಚ್ಚು ಉತ್ಪಾದನೆ ಮಾಡುವ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಿದೆ. ರಾಜ್ಯದ ಜನರಿಗೆ ನೈಸರ್ಗಿಕವಾಗಿ ಬಯೋ ಡೀಸಲ್ ಜೊತೆಗೆ ಬಯೋ ಗ್ಯಾಸ್ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಸಿಎಂ ಕನಸು ನನಸು ಮಾಡಲು ನಿರಂತರ ಪ್ರಯತ್ನ ಮಾಡುತಿದ್ದೇವೆ ಎಂದರು.