ನಂಜನಗೂಡು: ಮಾರ್ಚ್ 06 ರಂದು ಬಜೆಟ್ ಮಂಡನೆ ಆಗುತ್ತಿದ್ದು, ನಮ್ಮ ನಂಜನಗೂಡು ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅನುದಾನವನ್ನು ನೀಡುತ್ತಾರೆ ಎಂಬ ಭರವಸೆ ನನಗಿದೆ ಎಂದು ಶಾಸಕ ದರ್ಶನ್ ಧ್ರುವ ನಾರಾಯಣ್ ತಿಳಿಸಿದರು.

ಈಗಾಗಲೇ ನಮ್ಮ ಕ್ಷೇತ್ರಕ್ಕೆ ನಂಜನಗೂಡಿನಲ್ಲಿ ಕ್ರೀಡಾಂಗಣ ನಿರ್ಮಾಣ, ಐ ಟಿ ಐ ಕಾಲೇಜು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳನ್ನು ಬಜೆಟ್ ನಲ್ಲಿ ನೀಡಬೇಕು ಎಂದು ಕೇಳಿಕೊಂಡಿದ್ದೇವೆ. ನಮ್ಮ ತಾಲ್ಲೂಕಿಗೆ ಮುಖ್ಯಮಂತ್ರಿಗಳು ವಿಶೇಷ ಅನುದಾನವನ್ನು ಬಜೆಟ್ ನಲ್ಲಿ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದರು.