ಎಚ್. ಡಿ. ಕೋಟೆ: ಇಂದು ಶಿಕ್ಷಣ ಇಲಾಖೆ ವತಿಯಿಂದ ಎಚ್.ಡಿ. ಕೋಟೆ ಮತ್ತು ಸರಗೂರು ತಾಲೂಕಿನ ಶಿಕ್ಷಕರು ಸೇರಿ ಅದ್ದೂರಿಯಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ನಡೆಸಿದರು.
ಪಟ್ಟಣದ ಜೂನಿಯರ್ ಕಾಲೇಜ್ ಮೈದಾನದಿಂದ ಬೆಳ್ಳಿರಥದ ಮೂಲಕ ಮೆರವಣಿಗೆ ಹೊರಟು ಕನಕ ಭವನದಲ್ಲಿ ಸಮಾವೇಶ ಗೊಳ್ಳಲಾಯಿತು. ಈ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅನಿಲ್ ಚಿಕ್ಕಮಾದು ಮಾತಾನಾಡಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು, ಯಾಕೆಂದರೆ ಇವತ್ತು ಜಗತ್ತಿನ ಯಾವುದೆ ರಂದದಲ್ಲಿ ಸಾಧನೆ ಮಾಡಿದ್ದರು ಅದರ ಮೂಲ ಶಿಕ್ಷಣ. ಶಿಕ್ಷಣ ಪಡೆದುದ್ದರಿಂದಲೇ ದೇಶಕ್ಕೆ ಪ್ರಧಾನಿ, ರಾಜ್ಯಕ್ಕೆ ಮುಖ್ಯಮಂತ್ರಿ ಮತ್ತಿತರ ಜವಾಬ್ದಾರಿ ಹುದ್ದೆಗಳನ್ನು ಅಲಂಕರಿಸಲು ಸಾಧ್ಯ. ನಾನು ಕೂಡ ಶಾಸಕನಾಗಲಿಕ್ಕೆ ಶಿಕ್ಷಣವೇ ಕಾರಣ ಎಂದರು.
ಇದೇ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಸಿ, ಎನ್ ರಾಜು ಪ್ರಾಸ್ತಾವಿಕ ಮಾತಾನಾಡಿ ಹನೂರು ಚೆನ್ನಪ್ಪ ಪ್ರಧಾನ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ, ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಖಾಸಗಿ ಶಾಲಾ ಶಿಕ್ಷಕರು, ಅತಿಥಿ ಶಿಕ್ಷಕರು, ಸಂಘ ಸಂಸ್ಥೆ ಪ್ರತಿನಿಧಿಗಳು ಭಾಗವಹಿಸಿದ್ದರು.

