ನಂಜನಗೂಡು: ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಬಿಡುವ ಹರಕೆ ಗೂಳಿಯ ಬಾಲವನ್ನು ಕಟ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂಜನಗೂಡಿನ ಹಳ್ಳದ ಕೇರಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಈಗಾಗಲೇ ನಮ್ಮ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.

ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸುತ್ತಮುತ್ತಲಿನ ಪ್ರದೇಶದಲ್ಲಿ ಸಿಸಿ ಕ್ಯಾಮರಗಳನ್ನು ಪರಿಶೀಲಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ವಿಷ್ಣುವರ್ಧನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.