ಮೈಸೂರು: ಚಾಕು ಹಿಡಿದ ಯುವಕನೊಬ್ಬ ರಸ್ತೆಯಲ್ಲಿ ಓಡಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಪಟ್ಟಣದಾದ್ಯಂತ ಓಡಾಡುತ್ತಿದ್ದ ದೃಶ್ಯಗಳನ್ನ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಮಾಹಿತಿ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ಯುವಕನನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

