ಮೈಸೂರು : ಖದೀಮರ ಹಾವಳಿ ಮೈಸೂರಿನಲ್ಲಿ ಮುಂದುವರೆದಿದ್ದು, ತಡರಾತ್ರಿ ಮಹಾಬಲೇಶ್ವರ ದೇವಸ್ಥಾನಕ್ಕೆ ಕಳ್ಳರು ನುಗ್ಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ನಡೆದಿದೆ.

ದೇವಾಲಯದಲ್ಲಿದ್ದ ಬೆಳ್ಳಿ ವಿಗ್ರಹಗಳು, ಹುಂಡಿ, ಬೆಳ್ಳಿ, ಕಂಚಿನ ಆಭರಣಗಳನ್ನ ಕಿಡಿಗೇಡಿಗಳು ದೋಚಿದ್ದಾರೆ. ದೇವಾಲಯದ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಸಂಕ್ರಾಂತಿ ಹಬ್ಬ ಹಿನ್ನಲೆ ದೇವಾಲಯದಲ್ಲಿ ಪೂಜೆಗಾಗಿ ಬಂದಾಗ ಕಳ್ಳತನ ಬೆಳಕಿಗೆ ಬಂದಿದೆ.

ಇತ್ತೀಚಿಗೆ ಮೈಸೂರು ಜಿಲ್ಲೆಯಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ನಡೆಯುತ್ತಿದೆ. ಕಳ್ಳರು, ದರೋಡೆಕೋರರ ಕಾಟಕ್ಕೆ ಜಿಲ್ಲೆಯ ಜನ ಬೆಚ್ಚಿ ಬಿದ್ದಿದ್ದಾರೆ. ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.