ನಂಜನಗೂಡು: ನಗರದ ಶ್ರೀ ಕಮಲಮ್ಮ ಗುರುಮಲ್ಲಪ್ಪ ಕಲ್ಯಾಣ ಮಂಟಪದಲ್ಲಿ ಶನಿವಾರ ಜಿಲ್ಲಾ ಪಂಚಾಯತ್ ಮೈಸೂರು, ಶಾಲಾ ಶಿಕ್ಷಣ ಇಲಾಖೆ ನಂಜನಗೂಡು ವತಿಯಿಂದ ಶಿಕ್ಷಕರ ದಿನಾಚರಣೆಯ ಗುರುವಂದನೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ್ಯೋತಿ ಬೆಳಗಿಸಿ, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಸಾವಿತ್ರಿ ಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸುಮಾರು ತಾಲ್ಲೂಕಿನಲ್ಲಿ ನಿವೃತ್ತಿ ಹೊಂದಿದ 46ಕ್ಕೂ ಹೆಚ್ಚು ಶಿಕ್ಷಕರಿಗೆ ಬೀಳ್ಕೊಡುಗೆ ನೀಡಿ ಸನ್ಮಾನಿಸಲಾಯಿತು. ಹಾಗೆ ತಾಲ್ಲೂಕಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದ ಸುಮಾರು 54 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100ರಷ್ಟು ಫಲಿತಾಂಶ ನೀಡಿದ ಶಾಲೆಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಕ.ಮಹೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮರತ್ನಾಕರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ದೀಪು, ಜಂಟಿ ಕಾರ್ಯದರ್ಶಿ ಎಂ.ಎ. ರಂಗನಾಥನ್, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಭುಸ್ವಾಮಿ, ಎಂ.ಎಸ್. ಸಿದ್ದರಾಜಪ್ಪ, ಸಿಎಂ ಶಂಕರ್, ರಾಜಕುಮಾರ, ಎಚ್ಎಸ್ ಮಹೇಶ, ಸೋಮಶೇಖರ್, ಬಿಆರ್ ಸಿ ಬಾಲರಾಜ್,  ಸುನಂದ, ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ತಾಲ್ಲೂಕಿನ ಶಿಕ್ಷಕರು ಹಾಜರಿದ್ದರು.