ನಂಜನಗೂಡು: ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಸೋನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹದೇವಪ್ಪ ಎಂಬುವರು ತಮ್ಮ 3 ಎಕರೆ ಜಮೀನಿನಲ್ಲಿ ಬಾಳೆ ಬೆಳೆಯನ್ನು ಬೆಳೆದಿದ್ದರೂ. ಇನ್ನೇನು ಬಾಳೆ ಫಸಲು ಕೈಗೆ ಬರುವ ಅಷ್ಟರಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಹಣವನ್ನು ಸಾಲ ಸೋಲ ಮಾಡಿ ಬೆಳೆಯನ್ನು ಬೆಳೆದಿದ್ದರು. ಆದರೆ, ಬಿರುಗಾಳಿ ಮಳೆಗೆ ಸಂಪೂರ್ಣವಾಗಿ ಬೆಳೆ ನಾಶವಾಗಿದೆ ಇದರಿಂದ ಸಾಲ ತೀರಿಸುವುದಾದರೂ ಹೇಗೆ ಎಂದು ರೈತ ಅಳಲು ತೋಡಿಕೊಂಡಿದ್ದಾನೆ.
ನಷ್ಟ ಅನುಭವಿಸಿದ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಮಹದೇವಪ್ಪ ಸರ್ಕಾರಕ್ಕೆ ಮನವಿ ಮಾಡಿದ್ದಾನೆ.

