ಮೈಸೂರು : ನದಿಯಲ್ಲಿ ಈಜಲು ಹೋಗಿ ಇಬ್ಬರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಮೇದಿನಿ ಗ್ರಾಮದಲ್ಲಿ ನಡೆದಿದೆ.

ಭರತ್ (17) , ಲಿಖಿತ್ (18) ವರ್ಷ ಮೃತ ಯುವಕರು. ಕೊಳ್ಳೇಗಾಲ ಪಟ್ಟಣದ ನಿವಾಸಿಗಳು ಮೇದಿನಿ ಗ್ರಾಮದ ರಾಮಕಟ್ಟೆ ಬಳಿ ಐವರು ಯುವಕರು ಈಜಲು ಬಂದಿದ್ದರು.

ಈ ವೇಳೆ ಭರತ್ ಹಾಗೂ ಲಿಖಿತ್ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದಾರೆ. ಉಳಿದ ಮೂವರು ಯುವಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.