ತಿ. ನರಸೀಪುರ: ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದ್ದು, ತಿ.ನರಸೀಪುರ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಅಶುಚಿತ್ವ ಎದ್ದು ಕಾಣುತ್ತಿದೆ.

ನಿಲ್ದಾಣದ ಅವರಣದ ಸುತ್ತ ಎಲ್ಲೆಂದರಲ್ಲಿ ಕಸವಿದ್ದು, ಆಳೆತ್ತರಕ್ಕೆ ಗಿಡ-ಗಂಟಿಗಳು ಬೆಳೆದು ನಿಂತಿದೆ. ಮೂಗು ಮುಚ್ಚಿಕೊಂಡು ಪ್ರಯಾಣಿಕರು ಓಡಾಡುತ್ತಿದ್ದಾರೆ. ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣಿಕರ ದಟ್ಟಣೆಯ ಬಸ್ ನಿಲ್ದಾಣ ಇದಾಗಿದೆ.

ಮೈಸೂರು ಕೊಳ್ಳೆಗಾಲ ಚಾಮರಾಜನಗರ ನಂಜನಗೂಡು ಭಾಗಕ್ಕೆ ಜನಸಂಚಾರ ಹೆಚ್ಚಾಗಿದೆ. ಅನೈರ್ಮಲ್ಯ ಬಗ್ಗೆ ಹಲವು ಭಾರಿ ಮನವಿ ಮಾಡಿದ್ರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಬಸ್ ನಿಲ್ದಾಣ ಸೇರಿದಂತೆ ಪಟ್ಟಣದಾದ್ಯಂತ ಸ್ವಚ್ಚತೆ ಕಾಪಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

View this post on Instagram

A post shared by News Karnataka (@newskarnataka)