ಮೈಸೂರು: ಏಪ್ರಿಲ್ 20 ರಂದು ಮೈಸೂರಿನಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಸಮಾವೇಶ ನಡೆಸಲು ಚಿಂತನೆ ನಡೆಸಿದೆ. ಇಂದು ಸಮಾವೇಶ ಕುರಿತು ಮೈಸೂರಿನಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಅಖಿಲ ಕರ್ನಾಟಕ ವಿಶ್ವ ಕರ್ಮ ಯುವ ಬ್ರಿಗೇಡ್ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಕೆಪಿಸಿಸಿ ಒಬಿಸಿ ರಾಜ್ಯ ಕಾರ್ಯದರ್ಶಿ ವಸಂತ ಮುರಳಿ ಆಚಾರ್ ಅಧ್ಯಕ್ಷತೆಯಲ್ಲಿ ನಗರದ ರೋಟರಿ ಭವನದಲ್ಲಿ ಪೂರ್ವಭಾವಿ ಸಭೆ ಜರುಗಿತು.
ಅಂದು ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಸಮುದಾಯದ ಬಲ ವರ್ಧನೆ, ವಿಶ್ವಕರ್ಮ ನಿಗಮಕ್ಕೆ ಹೆಚ್ಚಿನ ಅನುದಾನಕ್ಕೆ ಅಂದು ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ. ಜೊತೆಗೆ ಅಂದು ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣೆ ಕೂಡ ಇರುತ್ತದೆ.
ನಮ್ಮ ಸಮುದಾಯ ಸಾಕಷ್ಟು ಹಿಂದುಳಿದಿದ್ದು ರಾಜಕೀಯ ಪ್ರಾತಿನಿಧ್ಯ ಸಿಗದೆ ನಾವು ರಾಜಕೀಯ ಕ್ಷೇತ್ರದಲ್ಲಿ ಗುತ್ತಿಸಿಕೊಳ್ಳಲು ಆಗುತ್ತಿಲ್ಲ. ನಮ್ಮ ಸಮುದಾಯ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದೆ. ನಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ಯೋಜನೆ ರೂಪಿಸಲಿ ನಾವು ಒತ್ತಾಯಿಸುತ್ತೇವೆ.
ಮುಂದಿನ ದಿನಗಳಲ್ಲಿ ಸಮುದಾಯ ಒಗ್ಗಟ್ಟಿನಿಂದ ಹೋರಾಟವನ್ನ ಮಾಡೋಣ ಎಂದು ಸಭೆಯಲ್ಲಿ ನಿರ್ಧಾರಿಸಲಾಯಿತು. ಸಭೆಯ ಬಳಿಕ ಸುದ್ದಿ ಗೋಷ್ಠಿ ನಡೆಸಿದ ಬ್ರಿಗೇಡ್ ಅಧ್ಯಕ್ಷ ನಾಗೇಂದ್ರರಿಂದ ಮಾಹಿತಿ ನೀಡಿದರು. ಸಭೆಯಲ್ಲಿ ವಿಶ್ವಕರ್ಮ ಮುಖಂಡ ಸಿದ್ದಪ್ಪಾಜಿ ವಿಶ್ವಕರ್ಮ, ರಾಮಲಿಂಗಾಚಾರಿ ರುದ್ರೇಶ್ ಇಲವಾಲ ಸೇರಿದಂತೆ ಹಲವಾರು ಸಮುದಾಯ ಮುಖಂಡರು ಭಾಗಿಯಾಗಿದ್ದರು.

