ಮೈಸೂರು : ವಿರೋಧದ ನಡುವೆ ಕೇಂದ್ರದಲ್ಲಿ ವಖ್ಫ್ ಬಿಲ್ ಮಂಡನೆಯಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಮೈಸೂರಿನಲ್ಲಿ SDPI ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

SDPI ಪಾರ್ಟಿ ಜಿಲ್ಲಾಧ್ಯಕ್ಷ ರಫತ್ ಖಾನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಮೈಸೂರಿನ ಎಫ್ ಟಿಎಸ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನಕಾರರ ಆಕ್ರೋಶ ವ್ಯಕ್ತಪಡಿಸಿದರು. ವಖ್ಫ್ ಬಿಲ್ ವಾಪಾಸ್ ಪಡೆಯುವಂತೆ SDPI ಆಗ್ರಹಿಸಿದರು. ವಖ್ಫ್ ಬಿಲ್ ಹರಿದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.