ಮೈಸೂರು : ಅನುದಾನ ಕೊಡುವ ತಾರತಮ್ಯ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಿಜೆಪಿ ಜೆಡಿಎಸ್ ಅಧಿಕಾರದಲ್ಲಿದ್ದಾಗ ನಮ್ಮ ಶಾಸಕರಿಗೆ ಏನು ಮಾಡಿದರು ಎಂಬುದು ಗೊತ್ತಿದೆ. ಕಾಂಗ್ರೆಸ್ ಶಾಸಕರಿಗೆ ಕೊಡುವ ಅನುದಾನದಲ್ಲಿ ಭಾರಿ ತಾರತಮ್ಯ ಮಾಡಿದರು ಎಂದರು.

ಅದನ್ನ ನಾವು ಪುನಾರವರ್ತನೆ ಮಾಡುವುದಿಲ್ಲ. ನಾವು ಎಲ್ಲರಿಗೂ ಸಮಾನವಾಗಿ ಅನುದಾನ ಕೊಡುತ್ತಿದ್ದೇವೆ‌ ಎಂದರು. ಜಾತಿ ಗಣತಿ ಸಮೀಕ್ಷೆ ವಿಚಾರವಾಗಿ ಮಾತನಾಡಿ, ಬೆಂಗಳೂರು ಬಿಟ್ಟರೇ ಬೇರೆ ಎಲ್ಲೂ ಸಮೀಕ್ಷೆಯಲ್ಲಿ ಹಿನ್ನಡೆಯಾಗಿಲ್ಲ.

ಹೀಗಾಗಿ ಜಾತಿ ಗಣತಿ ಸಮೀಕ್ಷೆಗೆ ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದರು. ಬಾಲಕಿ ರೇಪ್ ಅಂಡ್ ಮರ್ಡರ್ ವಿಚಾರವಾಗಿ  ಕೊಲೆಯಾದ ಬಾಲಕಿಗೆ ಪರಿಹಾರ ಕೊಡುವ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.