ಮೈಸೂರು: ಕಳೆ ಕೀಳಲು ಜಮೀನಿಗೆ ತೆರಳಿದ್ದ ವೃದ್ಧೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕು ಬಿಳಿಕೆರೆಯ ಹೊಸಪುರ ಗ್ರಾಮದಲ್ಲಿ ನಡೆದಿದೆ.
ಯಶೋದಮ್ಮ (65) ಮೃತ ದುರ್ದೈವಿ. ಬಸಪ್ಪ ಎಂಬುವರ ಜಮೀನಿನಲ್ಲಿ ಯಶೋದಮ್ಮ ಸೇರಿದಂತೆ 6 ಮಹಿಳೆಯರು ಕಳೆ ಕೀಳಲು ತೆರಳಿದ್ದರು. ಭಾರಿ ಮಳೆ ಆರಂಭವಾಗುತ್ತಿದ್ದಂತೆ ಮಹಿಳೆಯರು ಸುರಕ್ಷಿತ ಸ್ಥಳಕ್ಕೆ ತೆರಳಿದರು.
ಆದರೆ ಯಶೋದಮ್ಮ ಮಳೆಯಿಂದ ತಪ್ಪಿಸಿಕೊಳ್ಳಲು ಜಮೀನಿನ ಪಕ್ಕದಲ್ಲಿದ್ದ ಬೇವಿನ ಮರದ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ಏಕಾಏಕಿ ಸಿಡಿಲು ಬಡಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಧಾವಿಸಿದ್ದು, ಬಿಳಿಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

