ಮೈಸೂರು: ಜಮೀನು ವಿವಾದ ಹಿನ್ನೆಲೆ ಮಹಿಳೆಯನ್ನು ಎಳೆದಾಡಿ ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರತ್ನಪುರಿ ಗ್ರಾಮದಲ್ಲಿ ನಡೆದಿದೆ.

ಪುಟ್ಟಸ್ವಾಮಿ ಹಾಗು ಪುತ್ರ ಗೌತಮ್ ಎಂಬುವರ ವಿರುದ್ಧ ಆರೋಪ ಕೇಳಿಬಂದಿದೆ. ರೇಷ್ಮ ಎಂಬುವರಿಂದ ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯನ್ನು ಎಳೆದಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.