ನಂಜನಗೂಡು: ರಸ್ತೆಯಲ್ಲಿ ಹಳ್ಳ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸಮೀಪದ ಕಂಬದ ಕೊಲ್ಲಿ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಶಿರಮಳ್ಳಿ ಗ್ರಾಮದ ಮಾದೇಶ್ (20) ಮೃತ ಯುವಕನಾಗಿದ್ದಾನೆ. ನಂಜನಗೂಡು ಮತ್ತು ಹುಲ್ಲಹಳ್ಳಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ನಿಂದ ಹುಲ್ಲಹಳ್ಳಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಕಂಬದಕೊಲ್ಲಿ ಬಳಿ ಹಳ್ಳ ತಪ್ಪಿಸಲು ಹೋಗಿ ಬೈಕ್ ನಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.